ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ನಡೆದ ಉಪ ಚುನಾವಣೆಗೆ ಶಾಂತಿಯುತವಾಗಿ ಮತದಾನವಾಗಿದೆ. ಶಿಗ್ಗಾಂವಿಯಲ್ಲಿ ಶೇ.80.48 , ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶೇ.88.80, ಹಾಗೂ ಸಂಡೂರಿನಲ್ಲಿ ಶೇ.76.24ರಷ್ಟು ಮತದಾನವಾಗಿದೆ.
ಮೂರು ಕ್ಷೇತ್ರಗಳಲ್ಲೂ ಬೆಳಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಹಕ್ಕುಗಳನ್ನು ಚಲಾಯಿಸಿದರು. ಇದೇ ನ.23ರಂದು ಮತ ಎಣಿಕೆ ಪ್ರಕ್ರಿಯೆ ನೆಡೆಯಲಿದೆ.
ನ.23 ರಂದು ನಡೆಯುವ ಮತ ಎಣಿಕೆಯನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ ರಾಮನಗರ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ ಹಾವೇರಿ ಜಿಲ್ಲೆಯ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಸಂಡೂರು ವಿಧಾನಸಭಾ ಕ್ಷೇತ್ರದ ಮತಗಳ ಎಣಿಕೆ ಬಳ್ಳಾರಿ ಜಿಲ್ಲೆಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೆಡೆಸಲು ತಯಾರಿ ನೆಡಸಲಾಗಿದೆ.