16
ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿ ಯುವತಿಯೋರ್ವಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ರಾಜಾಜಿನಗರದ ನವರಂಗ್ ಸಮೀಪದ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ.
ಶೋರೂಂ ನಲ್ಲಿ ಕ್ಯಾಶಿಯರ್ ಆಗಿದ್ದ 20 ವರ್ಷದ ಪ್ರಿಯಾ ಎಂಬಾಕೆ ಹೊರಬರಲಾಗದೆ ಅಲ್ಲೇ ಸುಟ್ಟು ಕರಕಲಾಗಿದ್ದಾಳೆ. ಸ್ಥಳಕ್ಕೆ ಎರಡು ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.
ಶೋರೂಂನಲ್ಲಿದ್ದ 45ಕ್ಕೂ ಹೆಚ್ಚು ಸ್ಕೂಟರ್ಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ.