ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಈ ಮೂರೂ ಕ್ಷೇತ್ರಗಳ ಉಪಚುಣಾವಣೆ ಯಾವುದೇ ಅಧಿಕಾರದಲ್ಲಿ ಬದಲಾವಾಣೆ ತರವುದಿಲ್ಲವಾದರೂ, ಮೂರೂ ಪಕ್ಷಗಳಿಗೆ ಮುಂದಿನ ರಾಜಕೀಯ ನಡೆಗಳಿಗೆ ದಿಕ್ಸೂಚಿ ಆಗುವುದಾಗಿ ವಿಶ್ಲೇಸಿಲಾಗಿದೆ.
ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್, ಪ್ರಧಾನ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ಪಾಲಿಗೆ ಮಹತ್ವದ್ದೆನಿಸಿದೆ. 2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಅವಲೋಕಿಸುವುದಾದರೆ ಸಂಡೂರಿನಲ್ಲಿ ಕಾಂಗ್ರೆಸ್ನಿಂದ ತುಕಾರಾಂ, ಶಿಗ್ಗಾವಿಯಲ್ಲಿ ಬಿಜೆಪಿಯಿಂದ ಬಸವರಾಜ ಬೊಮ್ಮಾಯಿ, ಚನ್ನಪಟ್ಟಣದಲ್ಲಿ ಜೆಡಿಎಸ್ನಿಂದ ಎಚ್.ಡಿ.ಕುಮಾರಸ್ವಾಮಿ ಗೆದ್ದಿದ್ದರು. ಈ ಮೂರೂ ಕ್ಷೇತ್ರಗಳು ಲೋಕಸಭಾ ಚುಣಾವಣೆಯಲ್ಲಿ ಗೆದ್ದಿದ್ದ ವಿಧಾನಸಭಾಸದಸ್ಯರೇ ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಈ ಕ್ಷೇತ್ರಗಳು ತೆರವಾಗಿದ್ದವು.
ಮೂರು ಕ್ಷೇತ್ರದಿಂದ ಒಟ್ಟು 5.83 ಲಕ್ಷ ಮಂದಿ ಮತ ಚಲಾಯಿಸಿದ್ದು, ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧರವಾಗಲಿದೆ.