2
ಅದಾನಿ ಹಾಗೂ ಮಣಿಪುರ ಹಿಂಸಾಚಾರ ಕುರಿತು ವಿಪಕ್ಷಗಳ ಗದ್ದಲ ಹಿನ್ನೆಲೆ ಚಳಿಗಾಲದ ಅಧಿವೇಶನದ ಆರಂಭದ ದಿನವಾದ ಸೋಮವಾರ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರು ಗದ್ದಲ ನಡೆಸಿದ ಹಿನ್ನೆಲೆ ಲೋಕಸಭೆ ಅಧಿವೇಶನವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.
ಪ್ರತಿಪಕ್ಷದ ಸದಸ್ಯರು ಉತ್ತರ ಪ್ರದೇಶದ ಸಂಭಲ್ನಲ್ಲಿ ನಡೆದ ಹಿಂಸಾಚಾರ ಖಂಡಿಸಿ ಘೋಷಣೆಗಳನ್ನು ಕೂಗಿದರು.
ಜತೆಗೆ ಮಣಿಪುರದಲ್ಲಿನ ಹಿಂಸಾಚಾರ ಮತ್ತು ಅಮೆರಿಕ ನ್ಯಾಯಾಲಯದಲ್ಲಿ ಅದಾನಿ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರಿಂದ ಗದ್ದಲ ಉಂಟಾಯಿತು.