ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಹಿನ್ನೆಲೆ ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ ಬರೆಯುವ ಮೂಲಕ ಕಾರ್ಯಕರ್ತರಲ್ಲಿ ಆಶಾಭಾವನೆಯ ಧೈರ್ಯ ತುಂಬಿದ್ದಾರೆ. ಸೋಲಿನಿಂದ ಕಾರ್ಯಕರ್ತರು ಎದೆಗುಂದಬೇಕಿಲ್ಲ. ಇದು ಮುಂದಿನ ಸವಾಲುಗಳನ್ನು ಎಚ್ಚರಿಸುವ ಸಂಕೇತ ಎಂದು ಭಾವಿಸೋಣ, ಎಂದಿದ್ದಾರೆ.
ವಾಮಮಾರ್ಗದಿಂದ ಗೆಲ್ಲುವುದು ಕಾಂಗ್ರೆಸ್‌ಗೆ ಹೊಸತಲ್ಲ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಸನಗೌಡ ಯತ್ನಾಳ್ ಪಾಟೀಲ ನೇತೃತ್ವದ ಬಣಕ್ಕೂ ಶಿಸ್ತುಕ್ರಮದ ಎಚ್ಚರಿಕೆಯ ಬಿಸಿ ಮುಟ್ಟಿಸಿದ್ದಾರೆ.