ಗದಗ: ಗದಗ ಜಿಲ್ಲಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ರವಿ ಗುಂಜಿಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾಗಿರುವ ರವಿ ಗುಂಜಿಕರ್, 2024-29 ರ ಅವಧಿಗೆ ಕರ್ನಾಟಕ ರಾಜ್ಯ ನೌಕರರ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.
ಕಳೆದ ಮೂರು ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದ ರವಿ ಗುಂಜಿಕರ್ ಇದೀಗ ಮತ್ತೊಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರವಿ ಗುಂಜಕರ್ ಗೆ ನೌಕರರ ಸಂಘದ ಸದಸ್ಯರು ಸನ್ಮಾಸಿ ಸಂಭ್ರಮಿಸಿದ್ದಾರೆ. ಪಟಾಕಿ ಸಿಡಿಸಿ ಬಣ್ಣ ಹಚ್ಚಿ ಸಿಹಿ ತಿನ್ನಿಸುವ ಮೂಲಕ ಗುಂಜಿಕರ್ ಅವರ ಗೆಲುವನ್ನ ಸಂಭ್ರಮಿಸಿದ್ದಾರೆ.ಇದೇ ವೇಳೆ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ನೌಕರರಿಗೆ ನೂತನ ಅಧ್ಯಕ್ಷರು ಅಭಿನಂದನೆ ಕೂಡ ಸಲ್ಲಿಸಿದ್ದಾರೆ.