ಬೆಂಗಳೂರು: ತನ್ನ ಮೇಲೆ KPCC ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ಅತ್ಯಾಚಾರ ನಡೆಸಿದ್ದಾರೆ ಎಂದು ಶಿಕ್ಷಕಿಯೊಬ್ಬರು ದೂರು ದಾಖಲಿಸಿದ ಬಳಿಕ ಕಾಂಗ್ರೆಸ್ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಿದೆ. ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ಗುರಪ್ಪ ನಾಯ್ಡು ಅವರ ವಿರುದ್ಧ ಲೈಂಗಿಕ ಕಿರುಕುಳ, ಬೆದರಿಕೆ, ಉದ್ದೇಶಪೂರ್ವಕ ಅವಮಾನ, ಮಹಿಳೆಯರ ಗೌರವಕ್ಕೆ ಧಕ್ಕೆ ತಂದ ಆರೋಪಗಳಡಿ FIR ದಾಖಲಿಸಲಾಗಿದೆ.
ಬೆಂಗಳೂರಿನ ತ್ಯಾಗರಾಜ ನಗರದ ಖಾಸಗಿ ಶಾಲೆಯೊಂದರಲ್ಲಿ ಗುರಪ್ಪ ನಾಯ್ಡು ಲೈಂಗಿಕ ಕಿರುಕುಳ ನೀಡಿದ್ದಾರೆ ಅಂತ ಆರೋಪಿಸಲಾಗಿದೆ. ಶಾಲೆಯ ಕೆಲ ಶಿಕ್ಷಕಿಯರು ಹಾಗೂ ಕೆಲ ಮಹಿಳಾ ಸಿಬ್ಬಂದಿಗೆ ಗುರಪ್ಪ ನಾಯ್ಡು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.