Home » News » ಕನ್ನಡಿಗರ ದೀರ್ಘ ಕಾಲದ ಹೋರಾಟದ ಫಲ ಕರ್ನಾಟಕ ಏಕೀಕರಣ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು.

ಕನ್ನಡಿಗರ ದೀರ್ಘ ಕಾಲದ ಹೋರಾಟದ ಫಲ ಕರ್ನಾಟಕ ಏಕೀಕರಣ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು.

by CityXPress
0 comments

ಗದಗ :  ಕರ್ನಾಟಕದ ಏಕೀಕರಣ ಹೋರಾಟದ ಹಿಂದೆ ಅನೇಕ ಮಹಾತ್ಮರ, ಹೋರಾಟಗಾರರ ಶ್ರಮವಿದೆ. ನಾಡಿನ ಭವ್ಯ ಪರಂಪರೆ ಇತಿಹಾಸವಿದೆ. ಕನ್ನಡಿಗರ ಧೀರ್ಘ ಕಾಲದ ಹೋರಾಟದ ಫಲವೇ ಕರ್ನಾಟಕ ಏಕೀಕರಣ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು. 

ಲಿಂಗಾಯತ ಪ್ರಗತಿಶೀಲ ಸಂಘದ ೨೭೨೧ನೇ ಶಿವಾನುಭವದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಕನ್ನಡ ಭಾಷೆ ಮಾತನಾಡುವ ಜನರು ಅರ್ಧದಷ್ಟು ಮೈಸೂರು ಪ್ರಾಂತ್ಯದಲ್ಲಿ, ಇನ್ನರ್ಧದಷ್ಟು ಮುಂಬೈ ಪ್ರಾಂತ್ಯದಲ್ಲಿ, ಮತ್ತೊಂದಿಷ್ಟು ಹೈದ್ರಾಬಾದ್ ಪ್ರಾಂತ್ಯದಲ್ಲಿ ಹರಿದು ಹಂಚಿಹೋಗಿದ್ದರು. ಕನ್ನಡ ಭಾಷಿಕರ ಪ್ರದೇಶವನ್ನು ಒಗ್ಗೂಡಿಸಲು ಆಲೂರು ವೆಂಕಟರಾಯರು, ದೊಡ್ಡಮೇಟಿ ಅಂದಾನಪ್ಪನವರು, ಕೌತಾಳ ವೀರಪ್ಪನವರು, ಹುಯಿಲಗೋಳ ನಾರಾಯಣರಾಯರು, ಡೆಪ್ಯೂಟಿ ಚೆನ್ನಬಸಪ್ಪನವರು ಹೀಗೆ ಅನೇಕ ಮಹಾತ್ಮರು ಹೋರಾಟ ಮಾಡಿ ಕನ್ನಡ ತಲೆಯೆತ್ತಿ ನಿಲ್ಲುವಂತೆ ಮಾಡಿದರು. ಕೆ.ಎಲ್.ಇ. ಸಂಸ್ಥೆಯ ಸಪ್ತರ್ಷಿಗಳು ಮರಾಠಿಗರ ಕಿರುಕುಳ ಸಹಿಸಿಕೊಂಡು ಕನ್ನಡ ಕಟ್ಟಿದರು. ಹಾಗೆಯೇ ಅನೇಕ ಮಠಮಾನ್ಯಗಳು ಕನ್ನಡ ಉಳಿಸುವ ಕಾರ್ಯವನ್ನು ಮಾಡಿದರು. ಅದರಲ್ಲಿ ಬೆಳಗಾಂವದ ನಾಗನೂರುಮಠ ಮುಂಚೂಣಿಯಲ್ಲಿದೆ. ಬಿದರಿನಲ್ಲಿ ಭಾಲ್ಕಿ ಪಟ್ಟದೇವರು ಹೊರಗೆ ಉರ್ದು ಶಾಲೆ ಎಂದು ಬೋರ್ಡ್ ಹಾಕಿ ಒಳಗೆ ಕನ್ನಡ ಕಲಿಸಿದರು ಎಂದು ಸ್ಮರಿಸಿದರು.

ಉಪನ್ಯಾಸಕರಾಗಿ ಆಗಮಿಸಿದ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿಂಗಟಗೆರಿಯ ಕಲ್ಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಡಾ. ಜಿ.ವಿ. ಮಂಜುನಾಥರವರು, ಕರ್ನಾಟಕ ಏಕೀಕರಣ ವಿಷಯ ಕುರಿತು ಮಾತನಾಡುತ್ತ ಬ್ರಿಟಿಷ್ ಅಧಿಕಾರಕ್ಕೆ ಒಳಗಾದ ಎಲ್ಲಾ ಕನ್ನಡದ ಊರು, ತಾಲೂಕು, ಜಿಲ್ಲೆಗಳನ್ನು ಒಟ್ಟುಗೂಡಿಸಿ, ಒಂದೇ ರಾಜಕೀಯ ವಿಭಾಗ ಹೇಗಾಯಿತು ಎಂಬ ಬಗ್ಗೆ ತುಂಬಾ ಸುಂದರವಾಗಿ ಅಭ್ಯಾಸಪೂರ್ಣವಾಗಿ ತಿಳಿಸಿದರು. ಕರ್ನಾಟಕ ಪ್ರಾಂತ ರಚನೆಯ ವಿಚಾರವನ್ನು ಮಹಾತ್ಮಾ ಗಾಂಧೀಜಿಯವರು ಒಪ್ಪಿದ್ದನ್ನು ಅದರ ಹಿಂದಿನ ಒತ್ತಾಯವನ್ನು ಮನೋಜ್ಞವಾಗಿ ತಿಳಿಸಿದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ ಇತ್ತೀಚಿಗೆ ಕರ್ನಾಟಕ ಸರಕಾರದಿಂದ ಸಹಕಾರ ರತ್ನ ಪ್ರಶಸ್ತಿ ಪಡೆದ ಶಂಕರಣ್ಣ ಮುನವಳ್ಳಿಯವರನ್ನು ಶ್ರೀಮಠದಲ್ಲಿ ಸಂಮಾನ ಮಾಡಲಾಯಿತು. ಸಂಮಾನಿತರಾಗಿ ಮಾತನಾಡಿದ ಅವರು ಪ್ರತಿಯೊಬ್ಬರು ಹುಟ್ಟಿದ ಮೇಲೆ ಸಮಾಜಕ್ಕಾಗಿ ಏನಾದರೂ ಕೆಲಸ ಮಾಡಬೇಕು. ಸಮಾಜದ ಏಳ್ಗೆಗೆ ಶ್ರಮಿಸಬೇಕು. ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳೊಂದಿಗೆ ಡಂಬಳದವರೆಗೆ ಪಾದಯಾತ್ರೆ ಮಾಡಿದ್ದನ್ನು ಸ್ಮರಿಸಿಕೊಂಡರು. ನಾವು ಬದುಕಬೇಕು, ಸಮಾಜವನ್ನು ಬದುಕಿಸಬೇಕು. ಇದು ನಮ್ಮ ಗುರಿಯಾಗಬೇಕು ಎಂದರು.

banner

ಹುಬ್ಬಳ್ಳಿಯ ಕೆ.ಎಲ್.ಇ. ಸಂಸ್ಥೆಯ ಬಿವಿಬಿ ಕಾಲೇಜಿನ ಪ್ರಾಧ್ಯಾಪಕರಾದ ವೀರುಪಾಕ್ಷಯ್ಯ ಹೊಸಳ್ಳಿಮಠ ಇವರಿಂದ ಬಾನ್ಸುರಿ ವಾದನ ನಡೆಯಿತು. ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ಇವರು ಸಂಗೀತ ಸೇವೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಂಶಿಮಠ ಹಾಗೂ ಈಶಣ್ಣ ಮುನವಳ್ಳಿ ಆಗಮಿಸಿದ್ದರು ಧರ್ಮಗ್ರಂಥ ಪಠಣವನ್ನು ಶ್ರಾವಂತಿ .ಎಸ್. ಕಟ್ಟಿ ಹಾಗೂ ವಚನ ಚಿಂತನವನ್ನು ವೀಣಾ .ಬಿ. ಕಟ್ಟಿ ಮಾಡಿದರು. ದಾಸೋಹ ಸೇವೆಯನ್ನು ಮುರಿಗೆಪ್ಪ .ಎಸ್. ನಾಲ್ವಾಡ, ಎಸ್.ಎಂ. ನಾಲ್ವಾಡ & ಕಂಪನಿ ಗದಗ ಹಾಗೂ ಪರಿವಾರದವರು ನೆರವೇರಿಸಿದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಬಾಲಚಂದ್ರ ಭರಮಗೌಡ್ರ, ಕಾರ್ಯದರ್ಶಿಯಾದ ವೀರಣ್ಣ ಗೋಟಡಕಿ, ಸಮಿತಿಯ ಚೇರ್ಮನ್‌ರಾದ ಐ.ಬಿ. ಬೆನಕೊಪ್ಪ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಡಾ. ಉಮೇಶ ಪುರದ ಪರಿಚಯಿಸಿದರೆ, ಬಾಲಚಂದ್ರ ಭರಮಗೌಡ್ರ ಸ್ವಾಗತಿಸಿದರು. ಮಂಜುಳಾ ಹಾಸೀಲಕರ ನಿರೂಪಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb