28
ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದೆ.ಆದರೆ ಇದೇ ಹೊತ್ನಲ್ಲಿ, ಪಂಚಮಸಾಲಿ ಸಮಾಜದ ಮುಖಂಡರಿಗೆ ಕರೆ ಮಾಡಿ ಬೆದರಿಕೆ ಹಾಕುವ ಕೆಲಸ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಬಾಗಲಕೋಟೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅರೋಪಿಸಿದ್ದಾರೆ.
“ಕಳೆದ 4 ದಿನಗಳಿಂದ ಪಂಚಮಸಾಲಿ ತಾಲೂಕು, ಜಿಲ್ಲಾ ಘಟಕದ ಅಧ್ಯಕ್ಷರಿಗೆ ಕರೆ ಮಾಡಿ ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಬೆದರಿಕೆ ಕರೆಗಳಿಂದ ಏನಾದರೂ ಆದರೆ ರಕ್ತ ಕ್ರಾಂತಿ ಆಗುತ್ತದೆ” ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.