ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸರ್ಕಾರದ ವಿವಿಧ ಸಚಿದ್ವಯರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ, ಭ್ರಷ್ಟಾಚಾರ ದೂರಿನ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಮನವಿ ಮಾಡಿದೆ.
ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನಿಸಲಾಗಿದೆ. ಈ ಕೇಸ್ ಸಂಬಂಧ ಟಿಜೆ ಅಬ್ರಾಹಂ ದೂರಿನ ಮೇರೆಗೆ 2020 ರಲ್ಲೂ ರಾಜ್ಯಪಾಲರಿಗೆ ಕಡತ ಮಂಡಿಸಲಾಗಿತ್ತು, ಆದರೆ ಅದನ್ನು ರಾಜ್ಯಪಾಲರು ತಿರಸ್ಕರಿಸಿದ್ದರು.ಇದೀಗ ಇಂದಿನ ರಾಜ್ಯಪಾಲರ ನಡೆಯತ್ತ ಸರ್ಕಾರದ ಚಿತ್ತ ನೆಟ್ಟಿದೆ.