ವಿಜಯಪುರ: ಕಾರ್ ಹಾಗೂ ಕಬ್ಬು ಕಟಾವು ಯಂತ್ರದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಸ್ಥಳದಲ್ಲೆ ಐವರ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಸಂಭವಿಸಿದೆ.
ಈ ಅಪಘಾತದ ರಭಸಕ್ಕೆ ಕಾರಲ್ಲಿದ್ದ ಐವರು ಸಾವಿಗೀಡಾಗಿದ್ದು, ಇವರಲ್ಲಿ ಇಬ್ಬರು ಮಹಿಳೆಯರು ಮೂರು ಜನ ಪುರುಷರು ಮೃತಪಟ್ಟಿದ್ದಾರೆ. ನಿಂಗಪ್ಪ ಪಾಟೀಲ್ (55), ಶಾಂತಪ್ಪ ಪಾಟೀಲ್ (45), ಭೀಮಶಿ ಸಂಕನಾಳ (65), ಶಶಿಕಲಾ (50), ದಿಲೀಪ್ ಪಾಟೀಲ್ (45) ಎಂದು ಮೃತರನ್ನು ಗುರುತಿಸಲಾಗಿದೆ. ಇನ್ನೊಂದು ಗಾಡಿಯನ್ನು ಹಿಂದಿಕ್ಕುವಾಗ ಈ ಅಪಘಾತ ಸಂಭವಿಸಿದೆಯಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.
ಇವರಲ್ಲರೂ ವಿಜಯಪುರ ತಾಲೂಕು ಅಲಿಯಾಬಾದ್ ನಿವಾಸಿಗಳು ಎಂದು ತಿಳಿದುಬಂದಿದೆ. ಹುಣಸಗಿ ಯಿಂದ ತಾಳಿಕೋಟೆಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ತಾಳಿಕೋಟೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ತಾಳಿಕೋಟೆ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.