ಲಕ್ಷ್ಮೇಶ್ವರ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಪಾರ್ಕ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಸದಾನಂದ ನಂದೇಣ್ಣವರ್ ಆಗ್ರಹಿಸಿದರು.
ಅಂಬೇಡ್ಕರ್ ಅವರ ಮಹಾಪರಿನರ್ವಾಣ ದಿನದ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆಗೆ ನಾವು ಎಲ್ಲಿಗೆ ಹೋಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಅಂಬೇಡ್ಕರ ನಿವಾಸಿಗಳು ಪುರಸಭೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.
ನಗರೋತ್ಥಾನ ಅಡಿಯಲ್ಲಿ ಕಾಮಗಾರಿಯು ಟೆಂಡರ್ ಆಗಿ ಆರು ತಿಂಗಳ ಕಳೆದರೂ ಅಂಬೇಡ್ಕರ್ ವೃತ್ತ ಇನ್ನೂ ಸಿದ್ಧವಾಗಿಲ್ಲ. ಈ ನಿರ್ಲಕ್ಷ್ಯ ಖಂಡನೀಯ ಎಂದು ಪುರಸಭೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೇಗನೆ ಈ ಕಾಮಗಾರಿಯು ಪ್ರಾರಂಭಗೊಂಡು ಪರ್ಣಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಉಗ್ರ ಹೋರಾಟ ಮಾಡುತ್ತೆವೆ ಎಂದು ಎಚ್ಚರಿಕೆ ನೀಡಿದರು.
ಸ್ಥಳಕ್ಕೆ ಆಗಮಿಸಿದ ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ಮಾತನಾಡಿ ಕಾಮಗಾರಿಯು ಹಿಂದೆಯೇ ಟೆಂಡರ ಆಗಿತ್ತು.ನಾನು ಪರಿಶೀಲಿಸಿ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೆನೆ.ಆದಷ್ಟು ಬೇಗ ಕಾಮಗಾರಿ ಪ್ರಾರಂಭಗೊಳ್ಳುತ್ತದೆ ಎಂದು ಭರವಸೆ ನೀಡಿದರು.