17
ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಹೌದು ಸರ್ಕಾರದಿಂದ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಬಿಈಡಿ ಹಾಗೂ ಡಿಈಡಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25/12/2024, ಆನ್‌ಲೈನ್ ಅರ್ಜಿಗಾಗಿ ವೆಬ್‌ಸೈಟ್ sevasindhu.karnataka.gov.in ಸಂಪರ್ಕಿಸುವಂತೆ ತಿಳಿಸಿದೆ.