ಇತ್ತೀಚೆಗೆ ಪುರುಷರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಅದಕ್ಕೆ ಯಾವುದೇ ನಿಯಂತ್ರಣ ಸಿಗುತ್ತಿಲ್ಲ. ಇದರ ಬೆನ್ನಲ್ಲೇ, ಸುಪ್ರೀಂ ಕೋರ್ಟ ಕಳವಳ ವ್ಯಕ್ತಪಡಿಸಿದೆ. ವಿವಾಹಿತೆಯರು ಸ್ವಾರ್ಥಕ್ಕಾಗಿ ತಮ್ಮ ಪತಿ ಮತ್ತು ಅತ್ತೆ-ಮಾವಂದಿರಿಗೆ ಕಿರುಕುಳ ನೀಡಲು ಕಾನೂನನ್ನು ವ್ಯಾಪಕವಾಗಿ ಬಳಸುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಪತ್ನಿ ಮತ್ತು ಅತ್ತೆಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ 34 ವರ್ಷದ ಬೆಂಗಳೂರಿನ ಟೆಕ್ಕಿಗೆ ನ್ಯಾಯಕ್ಕಾಗಿ ಹೆಚ್ಚುತ್ತಿರುವ ಬೇಡಿಕೆ ಮಧ್ಯೆ ಸುಪ್ರೀಂ ಕೋರ್ಟ ಈ ಬಗ್ಗೆ ಕಳವಳ ವ್ಯಕ್ತವಾಗಿದೆ. ಮಹಿಳೆಯರನ್ನು ತಮ್ಮ ಕುಟುಂಬದ ಕ್ರೌರ್ಯದಿಂದ ರಕ್ಷಿಸುವ ಕಾನೂನನ್ನು ಹೆಚ್ಚಾಗಿ ದುರುಪಯೋಗಪಡಿಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಕೋರ್ಟ್ ಹೇಳಿದೆ.