14
ಬೆಳಗಾವಿ: ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿ ನಿಂದಿಸಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಗಂಭೀರ ಆರೋಪ ಮಾಡಿದ್ದಾರೆ. ಸ್ಪೀಕರ್ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿದ ಹೆಬ್ಬಾಳ್ಕರ್, ಸಿಟಿ ರವಿ ಸದಸ್ಯತ್ವ ರದ್ದು ಮಾಡುವಂತೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಸ್ಪೀಕರ್ ವಿಡಿಯೋ ಪರಿಶೀಲಿಸಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇತ್ತ ಸಿಟಿ ರವಿ ಆರೋಪವನ್ನು ತಳ್ಳಿಹಾಕಿದ್ದು, ನಾನೆಲ್ಲೂ ಅಶ್ಲೀಲ ಪದವನ್ನು ಬಳಸಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಇದೇ ವೇಳೆ ಸಿ.ಟಿ.ರವಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ.