ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಕುವೈತ್ ಪ್ರವಾಸ ಕೈಗೊಂಡಿದ್ದಾರೆ.43 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿ ಇದಾಗಿದೆ. ಕುವೈತ್‌ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಕುವೈತ್ ಗೆ ಪ್ರಯಾಣ ಬೆಳೆಸಿದ್ದರು.
ಈ ವೇಳೆ ಪ್ರಧಾನಿ ಮೋದಿ ಅವರು ಕುವೈತ್ ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಸ್ವೀಕರಿಸಿದ್ದಾರೆ. ಇದು ಪ್ರಧಾನಿ ಮೋದಿಗೆ ದೇಶವೊಂದು ನೀಡಿದ 20 ನೇ ಅಂತಾರಾಷ್ಟ್ರೀಯ ಗೌರವವಾಗಿದ್ದು, ಈ ಪ್ರಶಸ್ತಿ ಕುವೈತ್‌ನ ನೈಟ್‌ಹುಡ್ ಆರ್ಡರ್ ಆಗಿದೆ. ಇದನ್ನು ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಸಾರ್ವಭೌಮರು & ವಿದೇಶಿ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತದೆ. ಈ ಹಿಂದೆ ಈ ಪ್ರಶಸ್ತಿಯನ್ನು ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್ ಮತ್ತು ಜಾರ್ಜ್ ಬುಷ್ ಅವರಿಗೆ ನೀಡಲಾಗಿತ್ತು.