15
ಬೆಂಗಳೂರು: ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಹೊರಬಿದ್ದಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 9,326 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ರಾಜ್ಯ ಶಿಕ್ಷಣ ಇಲಾಖೆ ತಿಳಿಸಿದೆ. ವಿಶೇಷವೆಂದರೆ ರಾಜ್ಯದ ನಗರ ಭಾಗದಲ್ಲೇ ಶಾಲೆ ಬಿಡುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳ ಕಾಣಿಸಿಕೊಂಡಿದ್ದು, ಬೆಂಗಳೂರು ನಗರ ದಕ್ಷಿಣದಲ್ಲಿ 2,028 & ಬೆಂಗಳೂರು ನಗರ ಉತ್ತರದಲ್ಲಿ 1,824 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ 1,181 ಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ. ಈ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಯತ್ನ ಇಲಾಖೆಯಿಂದ ನಡೆಯುತ್ತಿದೆ ಎಂದು ಇಲಾಖೆ ತಿಳಿಸಿದೆ.