ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಇರಿದು ಪರಾರಿಯಾದ ದುಷ್ಕರ್ಮಿಯನ್ನು ಮುಂಬೈ ಪೊಲೀಸರು ಇದೀಗ ಬಂಧಿಸಿದ್ದಾರೆ.

ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದು, ಸದ್ಯ ಆರೋಪಿಯನ್ನು ಬಾಂದ್ರಾ ಠಾಣೆಗೆ ಕರೆ ತಂದಿದ್ದಾರೆ. ಆರೋಪಿಯನ್ನು ವಿಚಾರಣೆ ನಡೆಸಲಿರುವ ಪೊಲೀಸರು ಘಟನೆಯ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಿದ್ದಾರೆ.
*ನಿನ್ನೆ ಸೈಫ್ ಅಲಿಖಾನ್ ಮೇಲೆ ಹಲ್ಲೆ ನಡೆದಿತ್ತು..!*
ಮುಂಬೈನ ಬಾಂದ್ರಾ (ಪಶ್ಚಿಮ) ದಲ್ಲಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ನಿವಾಸಕ್ಕೆ ನಿನ್ನೆ (ಜ.16) ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದರು. ಬೆಳಗಿನ ಜಾವ 2:30ರ ಸುಮಾರಿಗೆ ಸೈಫ್ ಮನೆಗೆ ದುಷ್ಕರ್ಮಿಯೊಬ್ಬ ನುಗ್ಗಿದ್ದ. ಈ ವೇಳೆ ನಟನಿಗೆ ಎಚ್ಚರವಾಗಿದ್ದು, ದುಷ್ಕರ್ಮಿಯ ಜೊತೆ ಮಾರಾಮಾರಿ ನಡೆದಿದೆ. ಚಾಕುವಿನಿಂದ ಇರಿದು ಆತ ಪರಾರಿಯಾಗಿದ್ದ.
ಘಟನೆಯಲ್ಲಿ ಸೈಫ್ ಕುತ್ತಿಗೆ, ಕೈ, ಬೆನ್ನಿಗೆ ಗಾಯವಾಗಿತ್ತು. ಸದ್ಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.