ಸದ್ಯ ರಾಜ್ಯ ರಾಜಕೀಯದಲ್ಲಿ ಬಣ ಬಣ ಬಡಿದಾಟ ಜೋರಾಗಿದೆ. ಕಾಂಗ್ರೆಸ್ ಹಾಗೂ BJP ಎರೆಡೂ ಪಕ್ಷಗಳಲ್ಲಿ ಅಧಿಕಾರದ ಗುದ್ದಾಟ ಸದ್ದಿಲ್ಲದೇ ಇದ್ರೂ, ಗದ್ದಲವಾಗ್ತಾನೆ ಇದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಆಗಲೇಬೇಕು ಅಂತ ಯತ್ನಾಳ & ಟೀಂ ಪಟ್ಟು ಹಿಡಿದಿದೆ.

ಹೀಗಾಗಿ ಬಿಜೆಪಿ ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದಲೂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶಾಸಕ ರಮೇಶ ಜಾರಕಿಹೊಳಿ ಅವರ ಜೊತೆ ಚರ್ಚಿಸಿ, ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧೆಗೆ ನಮ್ಮ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು. ಪಕ್ಷದ ಹೈಕಮಾಂಡ್ ವಿಜಯೇಂದ್ರ ಅವರನ್ನು ಏಕೆ ಅಧ್ಯಕ್ಷರನ್ನಾಗಿ ಮಾಡಿದೆಯೋ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರನ್ನು ಬದಲಾಯಿಸಲೇಬೇಕು ಎಂದಿದ್ದಾರೆ.