ಯಕ್ಷಗಾನ ಅಂದ್ರೆನೆ ಹಾಗೆ, ಅದು ಅಂತಿಂಥವರಿಗೆ ಒಲಿಯುವ ಕಲೆಯಲ್ಲ. ಆದರೆ ಇದೀಗ ಅದೇ ಯಕ್ಷಗಾನ ಇದೀಗ, ಕಲಾವಿದೆಯೊಬ್ಬರಿಗೆ ಸರಿ ತಪ್ಪು ಚರ್ಚೆ ಹುಟ್ಟು ಹಾಕುವಂತೆ ಮಾಡಿದೆ.

ಕನ್ನಡ ಚಲನಚಿತ್ರ ಮೇರುನಟಿ, ಉಮಾಶ್ರೀ ಅವರು, ಯಕ್ಷಗಾನ ವೇಷದ ಬಗ್ಗೆ ಚಲನಚಿತ್ರ ಪ್ರೇಮಿಗಳು, ಜನರಿಂದ ಪ್ರಶಂಸೆ ವ್ಯಕ್ತವಾದ ಬೆನ್ನಲ್ಲೇ ಹಿರಿಯ ಕಲಾವಿದರು ಹಾಗೂ ಅಪ್ಪಟ ಯಕ್ಷಗಾನ ಪ್ರಿಯರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಚಿತ್ರರಂಗ ಹಾಗೂ ನಾಟಕದಲ್ಲಿ ಉಮಾಶ್ರೀ ಅವರ ಕಲೆಯ ಬಗ್ಗೆ ಎಲ್ಲರಿಗೂ ಗೌರವ ಇದೆ. ಆದರೆ, ಯಕ್ಷಗಾನದಲ್ಲಿ ಅವರನ್ನು ಕರೆತಂದು ಪಾತ್ರ ಮಾಡಿಸಬೇಕಿತ್ತೇ? ಎಂದು ಪ್ರಶ್ನಿಸಿದ್ದಾರೆ. ಮುಂದೆ ನೀಲಿ ಚಿತ್ರತಾರೆ ಸನ್ನಿ ಲಿಯೋನ್ ಸರದಿ ಎಂದು ಇನ್ನೊಬ್ಬರು ಕುಟುಕಿದ್ದಾರೆ.