ಗದಗ ಬೆಟಗೇರಿ ನಗರಸಭೆ ಹಾಗೂ ಗದಗ ತಾಲೂಕಿನಲ್ಲಿರುವ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961 ಹಾಗೂ ನಿಯಮಗಳು -1963 ರ ಅಡಿಯಲ್ಲಿ ನೊಂದಣಿ ಮಾಡಿಸಿಕೊಳ್ಳವುದು ಕಡ್ಡಾಯವಾಗಿದೆ.

ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ಈಗಾಗಲೇ ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕಾರ್ಮಿಕ ನಿರೀಕ್ಷಕರ ಕಚೇರಿ 1 ನೇ ವೃತ್ತ ಹಾಗೂ ಕಾರ್ಮಿಕ ನಿರೀಕ್ಷಕರ ಕಚೇರಿ ಗದಗ 2 ನೇ ವೃತ್ತ, ಗದಗ ಇಲ್ಲಿ ನೊಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಮಿಕರು ಇರುವ ಹಾಗೂ ಕಾರ್ಮಿಕರು ಇಲ್ಲದೇ ಇರುವ ಸಂಸ್ಥೆಗಳು ಸಹ ಕರ್ನಾಟಕ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ https://www.ekarmika.karnataka.gov.in/ ekarmika/static
ನಿಗದಿತ ಆನ್‌ಲೈನ್ ಮೂಲಕ ಶುಲ್ಕವನ್ನು ಮತ್ತು ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಸಂಸ್ಥೆಗಳ ನೋಂದಣಿ ಪತ್ರ ಪಡೆದುಕೊಳ್ಳಬೇಕೆಂದು ಗದಗ ಬೆಟಗೇರಿ ಹಾಗೂ ಗದಗ ತಾಲೂಕಿನ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರಿಗೆ ತಿಳುವಳಿಕೆ ನೀಡಲಾಗಿದೆ ಹಾಗೂ ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಕಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.