ಗದಗ: ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಫೆಬ್ರುವರಿ 18 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಸಚಿವರ ಪ್ರವಾಸ ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ.
ಫೆ. 18 ರಂದು ಬೆಳಿಗ್ಗೆ 7 ಗಂಟೆಗೆ ಧಾರವಾಡದಿಂದ ಹೊರಟು ಗದುಗಿಗೆ ಬೆಳಿಗ್ಗೆ 9 ಗಂಟೆಗೆ ಆಗಮಿಸುವರು. ಬೆಳಿಗ್ಗೆ 9.30 ಗಂಟೆಗೆ ರಾಜ್ಯದ ಕಾನೂನು, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಗದಗ ಜಿಲ್ಲೆಯ ಹುಲಕೋಟಿಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸಮುದಾಯ ಭವನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಬೆಳಿಗ್ಗೆ 10. ಗಂಟೆಯಿಂದ ಮಧ್ಯಾಹ್ನ 10.30 ಗಂಟೆಯವರೆಗೆ ಗದಗ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಟಾಧಿಕಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಡನೆ ಗದಗ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಸಭೆ ನಡೆಸುವರು.
ಬೆಳಿಗ್ಗೆ 10.30 ಗಂಟೆಯಿಂದ 11.30 ಗಂಟೆಯವರೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗದಗ ಜಿಲ್ಲಾ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾಲೀಕ ವರ್ಗದ ಸಂಘಟನೆಗಳ/ಆಡಳಿತ ವರ್ಗದವರ ಸಭೆ ಜರುಗಿಸುವರು.
ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಕಾರ್ಮಿಕ ಸಂಘಟನೆಗಳ ಸಭೆ ನಡೆಸುವರು. ನಂತರ ಪಕ್ಷದ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ಗದುಗಿನಿಂದ ಹುಬ್ಬಳ್ಳಿಗೆ ಪ್ರಯಾಣ ನಡೆಸುವರು ಎಂದು ಸಚಿವ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.