ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಸೌಜನ್ಯ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಸೌಜನ್ಯ ಪ್ರಕರಣದ ಬಗ್ಗೆ ಯುಟ್ಯೂಬರ್ ಸಮೀರ್ ಮಾಡಿದ್ದ ವಿಡಿಯೋ ಭಾರೀ ವೈರಲ್ ಆಗಿದ್ದು, 1 ಕೋಟಿಗೂ ಹೆಚ್ಚು ವೀವ್ಸ್ ಪಡೆದಿದೆ. ಈ ಬೆನ್ನಲ್ಲೇ ಸಮೀರ್ಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಸಮೀರ್ನನ್ನು ಬಂಧಿಸಲು ಪೊಲೀಸರು ಬಳ್ಳಾರಿಗೆ ತೆರಳಿದ್ದಾಗ ತಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ. ಈ ಬಳಿಕ ನೋಟಿಸ್ ನೀಡಿ ಪೊಲೀಸರು ಮರಳಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಸಮೀರ್ ವಿಡಿಯೋ ವೈರಲ್ ಬೆನ್ನಲ್ಲೇ SPಗಳಿಗೆ ADGP ಎಚ್ಚರಿಕೆ ನೀಡಲಾಗಿದೆ.ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂಬಾತ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ಬಗ್ಗೆ ಮಾಹಿತಿ ನೀಡಲು ವಿಫಲವಾಗಿರುವ ಇಲಾಖೆಯ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಎಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸೋಶಿಯಲ್ ಮಿಡಿಯಾ ಮಾನಿಟರಿಂಗ್ ಸೆಲ್ ಗಳನ್ನು ಚುರುಕುಗೊಳಿಸಬೇಕು. ಹಾಗೂ ಕೈಗೊಂಡ ಕ್ರಮದ ಬಗ್ಗೆ ಎಡಿಜಿಪಿಗೆ ಮಾಹಿತಿ ನೀಡಬೇಕು ಎಂದು ಪತ್ರದ ಮೂಲಕ ಎಚ್ಚರಿಕೆ ನೀಡಲಾಗಿದೆ.
