Saturday, April 19, 2025
Homeರಾಜ್ಯಭೋವಿ ನಿಗಮ ಹಗರಣ ತನಿಖೆ:ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ! ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್!

ಭೋವಿ ನಿಗಮ ಹಗರಣ ತನಿಖೆ:ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ! ಡಿವೈಎಸ್ಪಿ ಕನಕಲಕ್ಷ್ಮಿ ಅರೆಸ್ಟ್!

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್​ನೋಟ್​ ಬರೆದಿಟ್ಟು 2024 ನವೆಂಬರ್ 22ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು. ಇದೀಗ ಈ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ಅಕ್ರಮದ ಕುರಿತು ಕಾಂಗ್ರೆಸ್​ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದನ್ನು ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀ ಅವರು ತನಿಖೆ ಕೈಗೊಂಡಿದ್ದು, ಬೋವಿ ನಿಗಮದ ಫಲಾನುಭವಿಗಳಿಗೆ ಮೆಟಿರಿಯಲ್ ಪೂರೈಸಿದ  ಆರೋಪದ ಮೇಲೆ 34 ವರ್ಷದ ವಕೀಲೆ ಜೀವಾ ಎನ್ನುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದ್ರೆ, ವಿಚಾರಣೆ ಬಳಿಕ ವಕೀಲೆ ಜೀವಾ ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಜೀವಾ 11 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ ಎಂದು ಅವರು ತಮ್ಮ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು ಎಂದು ತಿಳಿದುಬಂದಿತ್ತು. ಬಳಿಕ ಸಿಐಡಿ ತನಿಖಾಧಿಕಾರಿ ಕನಕಲಕ್ಷ್ಮಿ ವಿರುದ್ಧ ಮೃತಳ ಸಹೋದರಿ ಸಹ ಗಂಭೀರ ಆರೋಪ ಮಾಡಿದ್ದರು.

ನವೆಂಬರ್ 22, 2024 ರಂದು, ಬನಶಂಕರಿ ಪೊಲೀಸರು ಕನಕ ಲಕ್ಷ್ಮಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 (ಎ) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108 ರ ಅಡಿಯಲ್ಲಿ ಜೀವಾ ಅವರ ಸಹೋದರಿ ಸಂಗೀತಾ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಪ್ರಕಾರ, ಕನಕ ಲಕ್ಷ್ಮಿ ಅವರು ನವೆಂಬರ್ 14 ಮತ್ತು 21, 2024 ರ ನಡುವೆ ಜೀವಾ ಅವರನ್ನು ವಿಚಾರಣೆಗೆ ಕರೆದರು, ಈ ಸಂದರ್ಭದಲ್ಲಿ ಅವರು ಉದ್ಯಮಿಗೆ ತೀವ್ರ ಕಿರುಕುಳ ನೀಡಿ 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ನವೆಂಬರ್ 22 ರ ಬೆಳಿಗ್ಗೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ರಾಜ್ಯ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ, 25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಇತ್ತೀಚಿಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳಾ ವಕೀಲೆಯೊಬ್ಬರ ಡೆತ್ ನೋಟ್ ಆರೋಪದ ನಂತರ ಡಿವೈಎಸ್ ಪಿ ಕನಕಲಕ್ಷ್ಮೀ ವಿರುದ್ಧ ವಿರುದ್ಧ ಬನಶಂಕರಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ಡಿವೈಎಸ್ ಪಿ ಕನಕಲಕ್ಷ್ಮೀ ವಿರುದ್ಧ ಸಿಸಿಬಿಯಿಂದ ತನಿಖೆಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಆದೇಶಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments