ಗದಗ: ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಏಳು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ. SSLC ಪರೀಕ್ಷೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಟಂಟಂ ವಾಹನ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಲಕ್ಕುಂಡಿ ಗ್ರಾಮದಿಂದ ಕಣಗಿನಾಳ ಗ್ರಾಮಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಂಟಂ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳೀಯರು ತಕ್ಷಣವೇ ಗಾಯಾಳು ವಿದ್ಯಾರ್ಥಿಗಳನ್ನು ಲಕ್ಕುಂಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಿ ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆಯ ಕುರಿತು ಗ್ರಾಮೀಣ ಪೊಲೀಸರು ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ವಾಹನದ ನಿಯಂತ್ರಣ ಕಳೆದುಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ತನಿಖೆ ಮುಂದುವರೆದಿದ್ದು, ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಗೊಳಿಸಿದ್ದಾರೆ.