Headlines

ಲೋಕಾಯುಕ್ತ ಜನ ಸಂಪರ್ಕ ಸಭೆ

ಗದಗ

ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಇವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ ಗದಗ ಕಚೇರಿ ಪೊಲೀಸ್ ಅಧಿಕಾರಿಗಳು ಏಪ್ರಿಲ್ 9 ರ ಬುಧವಾರದಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಚೇರಿ ಗದಗದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *