ಗದಗ: ಗದಗ-ಬೆಟಗೇರಿ ಶೈಕ್ಷಣಿಕ ವಲಯದಲ್ಲಿ ಪ್ರಾರಂಭದಿಂದಲೂ ಶೈಕ್ಷಣಿಕ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ಸ್ಟುಡೆಂಟ್ಸ್ ಎಜುಕೇಶನ್ ಸಂಸ್ಥೆಯ ಸನ್ಮಾರ್ಗ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯವು 2024–25ನೇ ಶೈಕ್ಷಣಿಕ ವರ್ಷದಲ್ಲಿ ಶ್ರೇಷ್ಠ ಫಲಿತಾಂಶ ಸಾಧಿಸಿ ಶೈಕ್ಷಣಿಕ ವಲಯದ ಮೆಚ್ಚುಗೆಗೆ ಪಾತ್ರವಾಗಿದೆ.
ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ
- ಕುಮಾರಿ ನೇಹಾ ಸೊರಟೂರ 96.5% ಅಂಕಗಳೊಂದಿಗೆ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಲೆಕ್ಕಶಾಸ್ತ್ರ ಹಾಗೂ ಅರ್ಥಶಾಸ್ತ್ರದಲ್ಲಿ 98, ವ್ಯವಹಾರ ಅಧ್ಯಯನದಲ್ಲಿ 97 ಮತ್ತು ಸಂಖ್ಯಾಶಾಸ್ತ್ರದಲ್ಲಿ 96 ಅಂಕಗಳನ್ನು ಗಳಿಸಿದ್ದಾಳೆ.
- ಕುಮಾರಿ ಸನಾ ನರೇಗಲ್ 95.84% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದು, ಸಂಖ್ಯಾಶಾಸ್ತ್ರದಲ್ಲಿ 100 ಅಂಕ, ವ್ಯವಹಾರ ಅಧ್ಯಯನ ಮತ್ತು ಹಿಂದಿಯಲ್ಲಿ 99 ಅಂಕ ಹಾಗೂ ಲೆಕ್ಕಶಾಸ್ತ್ರ ಮತ್ತು ಅರ್ಥಶಾಸ್ತ್ರದಲ್ಲಿ 98 ಅಂಕಗಳನ್ನು ಪಡೆದುಕೊಂಡಿದ್ದಾಳೆ.
- ಕುಮಾರಿ ಸಂಜನಾ ಪೂಜಾರ 94.84% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು, ವ್ಯವಹಾರ ಅಧ್ಯಯನದಲ್ಲಿ 98 ಅಂಕ, ಲೆಕ್ಕಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಹಿಂದಿಯಲ್ಲಿ 97 ಅಂಕ ಮತ್ತು ಅರ್ಥಶಾಸ್ತ್ರದಲ್ಲಿ 96 ಅಂಕ ಗಳಿಸಿದ್ದಾಳೆ.
ವಾಣಿಜ್ಯ ವಿಭಾಗದಿಂದ 15 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ನಲ್ಲಿ ಹಾಗೂ 31 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದ ಪ್ರಗತಿ
- ಕುಮಾರ ಪ್ರಜ್ವಲ ಅಂಗಡಿ 94.7% ಅಂಕಗಳೊಂದಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಗಣಿತದಲ್ಲಿ 100 ಹಾಗೂ ಸಂಖ್ಯಾಶಾಸ್ತ್ರದಲ್ಲಿ 98 ಅಂಕಗಳನ್ನು ಗಳಿಸಿದ್ದಾನೆ.
- ಕುಮಾರಿ ನಿತ್ಯಾ ನೀಲಕಂಠಮಠ 93.2% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದು, ಗಣಿತದಲ್ಲಿ 99 ಹಾಗೂ ಕನ್ನಡದಲ್ಲಿ 98 ಅಂಕಗಳನ್ನು ಗಳಿಸಿದ್ದಾಳೆ.
- ಕುಮಾರಿ ಶ್ರೀನಿಧಿ ಪತ್ತಾರ 91.84% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದು, ಸಂಖ್ಯಾಶಾಸ್ತ್ರದಲ್ಲಿ 99 ಅಂಕಗಳನ್ನು ಗಳಿಸಿದ್ದಾಳೆ.
ವಿಜ್ಞಾನ ವಿಭಾಗದಿಂದ 24 ವಿದ್ಯಾರ್ಥಿಗಳು ಡಿಸ್ಟಿಂಕ್ಶನ್ ನಲ್ಲಿ ಹಾಗೂ 88 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಒಟ್ಟು ಫಲಿತಾಂಶ ಶೇ. 90%

ಮೇಲಿನ ಈ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಸಂಸ್ಥೆಯ ಒಟ್ಟು ಫಲಿತಾಂಶ ಶೇ. 90% ಆಗಿದ್ದು, ಸಂಸ್ಥೆಯ ಅಧ್ಯಕ್ಷರಾದ ಪ್ರೊ. ರಾಜೇಶ್ ಕುಲಕರ್ಣಿ, ನಿರ್ದೇಶಕರಾದ ಪ್ರೊ. ರೋಹಿತ್, ಪ್ರೊ. ರಾಹುಲ್ ಒಡೆಯರ್, ಪ್ರೊ. ಪುನಿತ್ ದೇಶಪಾಂಡೆ, ಪ್ರೊ. ಸಯ್ಯದ್ ಮತೀನ್ ಮುಲ್ಲಾ, ಪ್ರಾಚಾರ್ಯರಾದ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿಗಳಾದ ಶ್ರೀ ಎಂ. ಸಿ. ಹಿರೇಮಠ ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. “ವಿದ್ಯಾರ್ಥಿಗಳ ಭವಿಷ್ಯ ಮತ್ತಷ್ಟು ಉಜ್ವಲವಾಗಲಿ” ಎಂದು ಎಲ್ಲರು ಹಾರೈಸಿದ್ದಾರೆ.