ಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಮತ್ತೋರ್ವ ಕನ್ನಡಿಗ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಮಂಜುನಾಥ್ ರಾವ್ ಹಾಗೂ ಬೆಂಗಳೂರಿನ ಭರತ್ ಭೂಷಣ್ ಮೃತ ದುರ್ದೈವಿಗಳು.
ಇದೇ ವೇಳೆ ಭಯೋತ್ಪಾದಕರ ದಾಳಿಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಕೂಡ ಮೃತಪಟ್ಟಿದ್ದಾರೆ. ಇಸ್ರೇಲ್ ಹಾಗೂ ಇಟಲಿ ಮೂಲದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದಾರೆ.ಸದ್ಯ ಸಾವಿನ ಸಂಖ್ಯೆ 27 ಕ್ಕೆ ಏರಿಕೆಯಾಗಿದೆ.

ಮೇಲಿನ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ಸಂಜೆ ಭಯೋತ್ಪಾದಕ ದಾಳಿ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಲಾಗಿದೆ. ಭಯೋತ್ಪಾದಕರ ಈ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗ ಸೇರಿ ಸುಮಾರು 20 ಪ್ರವಾಸಿಗರ ಸಾವಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಲಗಳು ಹೇಳುವಂತೆ ಭಯೋತ್ಪಾದಕರು ಮೊದಲು ಪ್ರವಾಸಿಗರಿಂದ ಹೆಸರುಗಳನ್ನು ಕೇಳಿದರು. ಆಗ ಪ್ರವಾಸಿಗರು ತಮ್ಮ ಹಿಂದೂ ಹೆಸರುಗಳನ್ನು ಹೇಳಿದಾಗ ಪ್ರವಾಸಿಗರ ಮೇಲೆ ಅವರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಚುರುಕುಗೊಂಡ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 2-3 ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ನೇರವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದು ಇದೇ ಮೊದಲು ಎಂಬುದು ಗಮನಾರ್ಹ. ಕಾಡಿನಿಂದ ಬಂದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ನಂತರ ಅಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಪ್ರವಾಸಿಗರು ತಮ್ಮ ಪ್ರಾಣ ಉಳಿಸಿಕೊಳ್ಳಲು ಎಲ್ಲಂದರಲ್ಲಿ ಓಡಲು ಪ್ರಾರಂಭಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಬಂದ ತಕ್ಷಣ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಆರಂಭಿಸಿದರು. ಗುಡ್ಡಗಾಡು ಪ್ರದೇಶಗಳಲ್ಲಿ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.