ಗದಗ, ಮೇ 29
ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ನಡೆಯುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜುಗಳಲ್ಲಿ ಈವರ್ಷದ (2025-26) ಸಾಲಿನಲ್ಲಿ ತಾತ್ಕಾಲಿಕವಾಗಿ ನೇಮಕವಾಗಲಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ ಜೂನ್ 1ರಂದು ನಡೆಯಲಿದೆ.
ಈ ಪರೀಕ್ಷೆಯಲ್ಲಿ ಭಾಗವಹಿಸಲು ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು, ಜೂನ್ 1ರಂದು (ಶನಿವಾರ) ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಗದಗ ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಜಿಲ್ಲಾ ಆಸ್ಪತ್ರೆಗೆ ಹಿಂದುಗಡೆ) ಇಲ್ಲಿ ನಡೆಯುವ ಪರೀಕ್ಷೆಗೂ ತಾವು ಹಾಜರಾಗಬೇಕಾಗುತ್ತದೆ.

ಮೇಲಿನ ಈ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಗದಗದ ಜಿಲ್ಲಾ ಕಚೇರಿಯಿಂದ ಪಡೆದು ಪರೀಕ್ಷೆಗೆ ಆಗಮಿಸಬೇಕಾಗಿದೆ. ಪ್ರವೇಶ ಪತ್ರವಿಲ್ಲದೇ ಪರೀಕ್ಷೆಗೆ ಅನುಮತಿ ನೀಡಲಾಗದು ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಅಥವಾ ಯಾವುದಾದರೂ ಅನುಮಾನಗಳಿದ್ದಲ್ಲಿ, ಗದಗದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ.

ಸೂಚನೆ: ಅಭ್ಯರ್ಥಿಗಳು ಪರೀಕ್ಷೆಗೆಂದು ಸಮಯಕ್ಕೂ ಮೊದಲು ಸ್ಥಳಕ್ಕೆ ಆಗಮಿಸಿ, ಅಗತ್ಯ ದಾಖಲೆಗಳೊಂದಿಗೆ ಸಿದ್ಧರಾಗಿ ಇರಬೇಕಾಗಿದೆ. ಪರೀಕ್ಷೆಯ ದಿನಾಂಕ, ಸಮಯ ಹಾಗೂ ಸ್ಥಳವನ್ನು ತಪ್ಪದೇ ಗಮನದಲ್ಲಿಡಬೇಕು.
