ಗದಗ : ಗದಗ ತಾಲೂಕ ಕುರುಬರ ಸಂಘದ ರಜತ ಮಹೋತ್ಸವದ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯಮಟ್ಟದ ಕನಕೋತ್ಸವ ಹಾಗೂ ಸಂಘಜೀವಿ ಫಕೀರಪ್ಪ ಹೆಬಸೂರು ಅವರ ಅಭಿನಂದನಾ ಗ್ರಂಥ ಸಮರ್ಪಣೆ ಕಾರ್ಯಕ್ರಮವು ಇದೇ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಕನಕ ಭವನದ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆಗೆ ರಾಜ್ಯದ ಮುಖ್ಯಮಂತ್ರಿ ಸಿ.ಎಂ.ಸಿದ್ಧರಾಮಯ್ಯ ಆಗಮಿಸಲಿದ್ದಾರೆ ಎಂದು ಸಮಾರಂಭದ ಸ್ವಾಗತ ಸಮಿತಿ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ ತಿಳಿಸಿದರು.
ಈ ಕುರಿತು ಗದಗನಲ್ಲಿ ಪತ್ರಿಕಾಗೋಷ್ಟಿ ಏರ್ಪಡಿಸಿ ಮಾತನಾಡಿದ ಅವರು, ಕುರುಬರ ಸಂಘದ ರಜತಮಹೋತ್ಸವದ ಸ್ಮರಣ ಸಂಚಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಕೆ. ಪಾಟೀಲ ಅವರು ಬಿಡುಗಡೆ ಮಾಡಲಿದ್ದಾರೆ. ನಾಮಪಲಕ ಅನಾವರಣವನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿಯವರು ಮಾಡುವರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ತಾಲೂಕ ಕುರುಬರ ಸಂಘದ ಅಧ್ಯಕ್ಷರಾದ ಫಕೀರಪ್ಪ ಹೆಬಸೂರ ಅವರು ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ, ಕಾರ್ಮಿಕ ಸಚಿವರಾದ ಸಂತೋಷ ಲಾಡ್, ಕರ್ನಾಟಕ ರಾಜ್ಯ ಪಂಚ ಯೋಜನಾ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷರಾದ ಎಚ್. ಎಮ್. ರೇವಣ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಶಾಸಕರು ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ ಶಿವಣ್ಣನವರ, ಶಾಸಕರು ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್. ವೈ. ಮೇಟಿ, ಶಾಸಕರು ಹಾಗೂ ರಬಕವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ರಾಘವೇಂದ್ರ ಹಿಟ್ನಾಳ್, ಶಾಸಕರು ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾದ ಬಿ.ಜಿ. ಗೋವಿಂದಪ್ಪ, ಶಾಸಕರು ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ, ಹುಬ್ಬಳ್ಳಿಯ ಹೆಸ್ಕಾಂನ ಅಧ್ಯಕ್ಷರಾದ ಅಜ್ಜಂಪೀರ ಖಾದ್ರಿ ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷಮಣರಾವ್ ಚಿಂಗಳೆ, ಹಾವೇರಿಯ ನಗರಾಭಿವೃದ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಫ್.ಎನ್. ಗಾಜಿಗೌಡ್ರು ಆಗಮಿಸುವರು.
ಅತಿಥಿಗಳಾಗಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ, ಕೊಪ್ಪಳ ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ, ನರಗುಂದ ಶಾಸಕರಾದ ಸಿ.ಸಿ. ಪಾಟೀಲ, ನವಲಗುಂದ ಶಾಸಕರಾದ ಎನ್. ಹೆಚ್. ಕೋನರೆಡ್ಡಿ, ಬಾದಾಮಿ ಶಾಸಕರಾದ ಭೀಮಸೇನ್ ಚಿಮ್ಮನಕಟ್ಟಿ, ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಎಸ್. ವಿ. ಸಂಕನೂರ, ಎಫ್.ಎಚ್. ಜಕ್ಕಪ್ಪನವರ, ಮಾಜಿ ಸಚಿವರಾದ ಕಳಕಪ್ಪ ಬಂಡಿ, ಮಾಜಿ ಶಾಸಕರಾದ ಜಿ.ಎಸ್.ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಶ್ರೀಮತಿ ಕುಸುಮಾವತಿ ಶಿವಳ್ಳಿ, ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಡಾ. ಬಿ. ಎಫ್. ದಂಡಿನ, ಸಮಾಜದ ಮುಖಂಡರಾದ ವಿ. ಆರ್. ಗುಡಿಸಾಗರ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರುಡಗಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ಕೆ.ಎಂ. ರಾಮಚಂದ್ರಪ್ಪ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷರಾದ ಎಂ. ಈರಣ್ಣ, ಪ್ರಧಾನ ಕಾರ್ಯದರ್ಶಿ ಎಂ. ವಿ. ಸೋಮಶೇಖರ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷಿ ಚೌದರಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಪೀರಸಾಬ್ ಕೌತಾಳ ಸೇರಿದಂತೆ ಮುಂತಾದವರು ಅಗಮಿಸುವವರು ಎಂದು ತಿಳಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಬಿ. ಆರ್. ಯಾವಗಲ್, ಗದಗ ತಾಲ್ಲೂಕ ಕುರುಬರ ಸಂಘದ ಅಧ್ಯಕ್ಷ ಪಕೀರಪ್ಪ ಹೆಬಸೂರ, ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ವಾಸಣ್ಣ ಕುರಡಗಿ, ಮಂಜುನಾಥ ಮುಂಡವಾಡ, ಪ್ರಕಾಶ ಕರಿ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.