ಗದಗ: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ.ಧಾರವಾಡದ ಕೆಐಎಡಿಬಿ ಎಇಇ, ಗಾಂಧಿ ನಗರ ಬಡಾವಣೆಯಲ್ಲಿನ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆದಿದ್ದು, ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತ ನರಗುಂದ ಪಟ್ಟಣದಲ್ಲಿನ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಯಾದ, ಪಟ್ಟಣದ ಹರಕೆರಿ ಟಿಪ್ಪು ಸುಲ್ತಾನ್ ಸರ್ಕಲ್ ಬಳಿಯ ನಿವಾಸಿ, ಎಸ್ ಬಿ ಭಜಂತ್ರಿ ಅವರ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮನೆಯಲ್ಲಿನ ಮಹತ್ವದ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.