ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಶುಕ್ರವಾರ ಚುಣಾವಣಾ ಪ್ರಚಾರಕ್ಕೆಂದು ತೆರಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್ ಮತ್ತು ಬ್ಯಾಗ್‌ಗಳನ್ನು ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ. ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಿರೋಧ ಪಕ್ಷದ ಸದಸ್ಯರ ಹೆಲಿಕಾಪ್ಟರ್ಗಳನ್ನು ಮಾತ್ರ ಕೂಲಂಕುಶವಾಗಿ ಪರಿಶೀಲಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಚುನಾವಣಾ ಆಯೋಗದ ಅಧಿಕಾರಿಗಳು ಹೆಲಿಕಾಪ್ಟರ್ ಅನ್ನು ಪರಿಶೀಲಿಸುತ್ತಿರುವ ವೀಡಿಯೊವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವುದಾಗಿ ತಿಳಿಸಿದ ಅವರು, ಚುನಾವಣಾ ಆಯೋಗದ ಎಲ್ಲಾ ನಿಯಮಗಳನ್ನು ನಾವು ಅನುಸರಿಸುತ್ತವೆ. ಪಾರದರ್ಶಕ ಚುನಾವಣಾ ವ್ಯವಸ್ಥೆ ನೆಡಸಲು ಮತ್ತು ಭಾರತವನ್ನು ವಿಶ್ವದ ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವಾಗಿರಿಸಲು ನಾವೆಲ್ಲರು ಆಯೋಗದ ನಿಯಮಗಳಿಗೆ ಭದ್ದರಾಗಿರಬೇಕು ಎಂದು ತಿಳಿಸಿದರು,(ಏಜೆನ್ಸೀಸ್).