ಗದಗ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಕೃಷಿಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ.
ಗಂಗಿಮಡಿ ನಿವಾಸಿ ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕನಾಗಿದ್ದು, ಮೂರು ದಿನಗಳ ಹಿಂದೆ ಬಾಲಕ ಕಾಣೆಯಾಗಿದ್ದನು. ಗದಗನ ಗ್ರಾಮಾಂತರ ಠಾಣೆಯಲ್ಲಿ ಬಾಲಕ ಕಾಣೆಯಾಗಿರುವ ಬಗ್ಗೆ ಪೋಷಕರು ದೂರು ಸಲ್ಲಿಸಿದ್ದರು.
ಆದರೆ ಇಂದು ಕೃಷಿ ಹೊಂಡದಲ್ಲಿ ಒಳ ಉಡುಪಿನ ಮೇಲೆ ಶವವಾಗಿ ಬಾಲಕ ಪತ್ತೆಯಾಗಿದ್ದು, ಈಜಲು ಹೋಗಿ ಬಾಲಕ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.