ಚಾಮರಾಜನಗರ: ಚಲಿಸುತ್ತಿದ್ದ ಕಾರ್ ನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಲಕ್ಕೂರಿನಿಂದ ಗುಂಡ್ಲುಪೇಟೆ ಕಡೆಗೆ ಹೋಗುವ ಉಡೀಗಾಲ ಮಾರ್ಗ ಮಧ್ಯೆ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಲಕ್ಕೂರು ಗ್ರಾಮದ ಗಣೇಶ್ ಪ್ರಾಣಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ತೆರಕಣಾಂಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಲವೇ ನಿಮಿಷಗಳಲ್ಲಿ ಕಾರು ಸುಟ್ಟು ಭಸ್ಮವಾಗಿದೆ.

ಬಿಸಿಲಿನ ತಾಪಕ್ಕೆ ಕಾರ್ ಹತ್ತಿರನೂ ಸಹ ಹೋಗದಷ್ಟು ಬೆಂಕಿ ಆವರಿಸಿಕೊಂಡಿದ್ದು, ಬೆಂಕಿಯ ಕೆನ್ನಾಲೆಗೆ ಕಾರು ಸುಟ್ಟು ಸಂಪೂರ್ಣ ಭಸ್ಮವಾಗಿದೆ.