ಲಕ್ಷ್ಮೇಶ್ವರ: ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಹೊರವಲಯದ ಜಮೀನಿನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊಲಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಜರುಗಿದೆ.
ವರದಿ : ಪರಮೇಶ ಎಸ್ ಲಮಾಣಿ.
ಸುಮಾರು 10 ರಿಂದ 12 ಎಕರೆ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿತ್ತು. ಅದೃಷ್ಟವಶಾತ್ ಜಮೀನಿನಲ್ಲಿ ಯಾವುದೇ ಬೆಳೆ ಇಲ್ಲದ ಲಕ್ಷಾಂತರ ಬೆಳೆ ಹಾನಿ ಆಗುವುದನ್ನು ತಪ್ಪಿದಂತಾಗಿದೆ.
ಬೆಂಕಿ ಹರಡುವುದನ್ನು ಗಮನಿಸಿದ ಸ್ಥಳೀಯ,ರೈತರು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ರೈತರೊಂದಿಗೆ ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿ ಬೆಂಕಿಯನ್ನು ಹತೋಟಿಗೆ ತಂದರು. ಇದರಿಂದಾಗಿ ಪಕ್ಕದ ತೋಟಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿತು.
ರೈತರಲ್ಲಿ ಜಾಗೃತಿ:
ಬೇಸಿಗೆ ಸಮಯ ಇರುವುದರಿಂದ ರೈತರು ಜಮೀನಿನಲ್ಲಿ ಬೆಂಕಿಯ ಬಗ್ಗೆ ಎಚ್ಚರಿಕೆ ವಹಿಸುವಂತೆ ಅಗ್ನಿಶಾಮಕ ಇಲಾಖೆ ತಿಳಿಸಿದೆ.
