ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರೋ ಹಿನ್ನೆಲೆ, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿಯ ಹೈಕಮಾಂಡ್ ಶಿಸ್ತು ಸಮಿತಿಯು ಶೋಕಾಶ್ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೆ, ಶಾಸಕ ಬಸನಗೌಡ ಯತ್ನಾಳ ನೋಟೀಸ್ ನೀಡಿರೋ ವಿಚಾರಕ್ಕೆ ತಮ್ಮ ಎಕ್ಸ್ ಖಾತೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
“ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಪ್ರಸ್ತುತಪಡಿಸುತ್ತೇನೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ರಾಜವಂಶದ ರಾಜಕೀಯಕ್ಕೆ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ.” ಎಂದು ಪರೋಕ್ಷವಾಗಿ ಮತ್ತೇ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ದ ತಮ್ಮ ಬಂಡಾಯ ಮುಂದುವರಿಸುತ್ತೇನೆ ಎಂದು ಹರಿಹಾಯ್ದಿದ್ದಾರೆ.
ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಂಟ್ರಿಕೊಟ್ಟಿದೆ.
ಹತ್ತು ದಿನದ ಒಳಗೆ ಉತ್ತರ ನೀಡುವಂತೆ ಯತ್ನಾಳಗೆ ನೋಟಿಸ್ ನೀಡಿದ್ದು, ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ನಿಲುವು ಹೊಂದಿದ ಹಿನ್ನೆಲೆ ನೋಟಿಸ್ ನೀಡಲಾಗಿದೆ. 10 ದಿನದೊಳಗೆ ಕಾರಣ ಕೊಡಿ ಎಂದು ಯತ್ನಾಳ್ ಗೆ ಹೈ ಕಮಾಂಡ್ ನೋಟಿಸ್ ಜಾರಿ ಮಾಡಲಾಗಿದೆ.
ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಕೆ ಕೈಗೊಳ್ಳಬಾರದು ಎಂಬುದನ್ನು ತಿಳಿಸಿ. ಹತ್ತು ದಿನಗಳ ಒಳಗೆ ಪ್ರತಿಕ್ರಿಯೆ ನೀಡಬೇಕು. ಈ ಸಮಯದೊಳಗೆ ನಿಮ್ಮ ವಿವರಣೆಯನ್ನು ಸಲ್ಲಿಸದಿದ್ದಲ್ಲಿ, ಕೇಂದ್ರ ಶಿಸ್ತು ಸಮಿತಿಯು ನಿಮಗೆ ಹೇಳಲು ಏನೂ ಇರುವುದಿಲ್ಲ. ಈ ವಿಷಯದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಮುಂದುವರಿಯುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ ಎಂದು ಶೋಕಾಸ್ ನೋಟೀಸ್ನಲ್ಲಿ ಉಲ್ಲೇಖಿಸಲಾಗಿದೆ.