ಬೀದರ್: RTO ಅಧಿಕಾರಿಯೊಬ್ಬರು ಶಾಸಕರಿಗೆ ಅವಾಜ್ ಹಾಕಿದ್ದಾರೆ ಅನ್ನೋ ಸುದ್ದಿ ಕೆಲವು ದಿನಗಳ ಹಿಂದೆ ವಿಡಿಯೋ ಸಮೇತ ಸಾಕಷ್ಟು ವೈರಲ್ ಆಗಿತ್ತು. ಪರಿಣಾಮ ಇದೀಗ ಆ ಅಧಿಕಾರಿಯ ತಲೆದಂಡ ಆಗಿದೆ. ಹೌದು, ಬೀದರ್ ನ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಸಾರಿಗೆ ಇಲಾಖೆಯ ಮೋಟಾರ್ ವಾಹನ (RTO) ಇನ್ಸ್‌ಪೆಕ್ಟರ್ ಮಂಜುನಾಥ್ ಕೊರವಿ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.
ಶಾಸಕ ಬೆಲ್ದಾಳೆ ಅವರು ಕೊರವಿ ವಿರುದ್ಧ ಸರ್ಕಾರಕ್ಕೆ ಹಕ್ಕುಚ್ಯುತಿ ದೂರು ಸಲ್ಲಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. ಅಕ್ಟೋಬರ್ 29ರ ರಾತ್ರಿ 10 ಗಂಟೆ ಸುಮಾರಿಗೆ ವಾಹನ ತಪಾಸಣೆ ನೆಪದಲ್ಲಿ ಹಲವು ವಾಹನ ತಡೆದ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.