ಗದಗ, ಡಿ.20:
ಸ್ಥಳೀಯ ಕೆಎಲ್‌ಇ ಸಂಸ್ಥೆಯ ಸಿಬಿಎಸ್‌ಇ ಶಾಲೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ರಜತ ಮಹೋತ್ಸವದ ಅಂಗವಾಗಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮವಾದ ‘ಬ್ಯಾಕ್ ಟು ಬೆಂಚಸ್’ ಅನ್ನು ಆಯೋಜಿಸಲಾಗಿದೆ.
“ಒಂದು ಶಾಲೆ, ಒಂದು ವೇದಿಕೆ – ಹಲವು ನೆನಪುಗಳು” ಎಂಬ ಮಹತ್ತರ ಉದ್ದೇಶದೊಂದಿಗೆ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮವು, ಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ ಇಂದು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಳೆಯ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಪ್ರಯತ್ನವಾಗಿದೆ.
ಈ ಕಾರ್ಯಕ್ರಮದಲ್ಲಿ ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಶಂಕರಣ್ಣ ಮುನವಳ್ಳಿ ಅವರು ಮುಖ್ಯ ಅತಿಥಿಗಳಾಗಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ವಿ. ಸಂಕನೂರ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಕಲ್ಪನಾ ಚಚಡಿ ಅವರು ವಹಿಸಿಕೊಳ್ಳಲಿದ್ದಾರೆ.
ಹಳೆಯ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯದರ್ಶಿ ಶ್ರೀ ಶಶಾಂಕ ಗಜಕೋಶ ಹಾಗೂ ಸಹ ಕಾರ್ಯದರ್ಶಿ ಶ್ರೀ ಜಾಫರ್ ಸಾಧಿಕ್ ಹೊಂಬಳ ಅವರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಶಾಲೆಯ ಹಳೆಯ ನೆನಪುಗಳನ್ನು ಮರುಜೀವಂತಗೊಳಿಸುವ ಪ್ರಯತ್ನವಾಗಲಿದೆ.
