Home ಸುತ್ತಾ-ಮುತ್ತಾ ಬೈಕ್ ಸ್ಕಿಡ್ ; ಸಂಗೀತ ಶಿಕ್ಷಕ ಸಾವು

ಬೈಕ್ ಸ್ಕಿಡ್ ; ಸಂಗೀತ ಶಿಕ್ಷಕ ಸಾವು

0
ಬೈಕ್ ಸ್ಕಿಡ್ ; ಸಂಗೀತ ಶಿಕ್ಷಕ ಸಾವು

ಬೈಕ್ ಸ್ಕಿಡ್ ಆದ ಪರಿಣಾಮ ಸಂಗೀತ ಶಿಕ್ಷಕನ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ಬಳಿ ನಡೆದಿದೆ.
ದರ್ಶನ್ ಶಹಾ ಸಾವನಪ್ಪಿರುವಂತಹ ಶಿಕ್ಷಕ ಎಂದು ತಿಳಿದುಬಂದಿದೆ. ಇವರು ಚಿಕ್ಕೋಡಿ ಚಿಕ್ಕೋಡಿ ಪಟ್ಟಣದ ಕೆಎಲ್ಇ ಸಂಸ್ಥೆಯ ಸಿಬಿಎಸ್ಸಿ ಶಾಲೆಯಲ್ಲಿ ಸಂಗೀತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬೈಕ್ ಮೇಲೆ ಹೋಗುತ್ತಿರುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಇದರಿಂದಾಗಿ ದರ್ಶನ ಅವರ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಕೂಡಲೆ ಇವರನ್ನು ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಕೊಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು.ಘಟನಾ ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ರೂಪಾ ಗೂಡೊಡಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here