ಲಕ್ಷ್ಮೇಶ್ವರ, ಎಪ್ರಿಲ್ 21:ಲಾರಿ ಹಾಗೂ ಬೈಕ್ ಡಿಕ್ಕಿ ಆಗಿ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿರೋ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ತಾಂಡಾ ಮುಖ್ಯ ರಸ್ತೆಯಲ್ಲಿ ನಡೆದಿದೆ. ಬೈಕ್ ಸವಾರರಾದ ಸುನೀಲ್ ಲಮಾಣಿ ಮತ್ತು ಮುತ್ತು ನಾಯಕ ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಹರದಗಟ್ಟಿ ಹಾಗೂ ಸೂವರ್ಣಗಿರಿ ತಾಂಡಾದ ನಿವಾಸಿಗಳಾಗಿದ್ದಾರೆ.
ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸವಾರರಿಗೆ, ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ನಂತರ, ಲಾರಿ ನಿಯಂತ್ರಣ ತಪ್ಪಿ, ಸವಾರರ ಸಮೇತ ಬೈಕ್ ನ್ನು ಕೆಲ ದೂರವರೆಗೆ ರಸ್ತೆಯ ಬದಿಗೆ ಎಳೆದೊಯ್ದ ಪರಿಣಾಮ, ಇಬ್ಬರ ಕಾಲುಗಳಿಗೆ ಗಂಭೀರವಾಗಿ ಗಾಯವಾಗಿದೆ.

ಮೇಲಿನ ಈ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಗಂಭೀರ ಗಾಯಗೊಂಡ ಇಬ್ಬರನ್ನೂ ತಕ್ಷಣ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ, ಲಾರಿ ಹಾಗೂ ಬೈಕ್ ನ್ನು ವಶಕ್ಕೆ ಪಡೆದು, ಪರಿಶೀಲನೆ ಕೈಗೊಂಡಿದ್ದಾರೆ.

ಸ್ಥಳೀಯರು ಈ ಮಾರ್ಗದಲ್ಲಿ ವಾಹನಗಳ ವೇಗದ ನಿಯಂತ್ರಣ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರಗಳ ಮೇಲೆ ಒತ್ತಾಯ ವ್ಯಕ್ತಪಡಿಸಿದ್ದಾರೆ.
