ಬೆಂಗಳೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.
ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನ ಮತ್ತು ಪಕ್ಷದ ಶಿಸ್ತು ಉಲ್ಲಂಘನೆ, ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ ಮಾಡಿದ್ದರಿಂದ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಅಲ್ಲದೇ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ.