ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ (97) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ ಅವರು ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಸದ್ಯ ವೈದ್ಯರ ನಿಗಾದಲ್ಲಿರುವ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಈ ವರ್ಷದ ಆರಂಭದಲ್ಲಿ ಆಗಸ್ಟ್ ತಿಂಗಳಿನಲ್ಲಿ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈನಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 4-5 ತಿಂಗಳಲ್ಲಿ ಸುಮಾರು ನಾಲ್ಕನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಿಜೆಪಿ ವಕ್ತಾರ ಕೆ.ಕೃಷ್ಣ ಸಾಗರ್ ರಾವ್ ಅವರು ಅಡ್ವಾಣಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ” ಶ್ರೀ ಅಡ್ವಾಣಿ ಅವರು ನಮ್ಮ ಅತ್ಯುನ್ನತ ನಾಯಕ, ಶೀಗ್ರ ಗುಣಮುಖರಾಗಲೆಂದು ನಾನು ಪ್ರಾರ್ಥಿಸುತ್ತೇನೆ. ಎಲ್.ಕೆ.ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ರಾವ್ ಟ್ವೀಟ್ ಮಾಡಿದ್ದಾರೆ.