Sunday, April 20, 2025
Homeದೇಶರಾಜ್ಯಕ್ಕೆ 3 ಹೊಸ ಕೇಂದ್ರೀಯ, 1 ನವೋದಯ ವಿದ್ಯಾಲಯ : ಕೇಂದ್ರದ ಕೊಡುಗೆ

ರಾಜ್ಯಕ್ಕೆ 3 ಹೊಸ ಕೇಂದ್ರೀಯ, 1 ನವೋದಯ ವಿದ್ಯಾಲಯ : ಕೇಂದ್ರದ ಕೊಡುಗೆ

ನಿನ್ನೆ ನೆಡೆದ ಕೇದ್ರ ಸಚಿವ ಸಂಪುಟ ಸಬೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಗುಡ್‌ ನ್ಯೂಸ್‌ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೇಂದ್ರ ಸಂಪುಟ ಸಮ್ಮತಿಸಿದೆ.

ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿ) ತೆರೆಯಲು ಸಂಪುಟ ಒಪ್ಪಿಗೆ ನೀಡಿದೆ. ಇದರಲ್ಲಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೂ ಅನುಮೋದನೆ ನೀಡಲಾಗಿದೆ.

ಕರ್ನಾಟಕದ ಮೂರು ಹೊಸ ಕೇಂದ್ರೀಯ ವಿದ್ಯಾಲಯಗಳು ಯಾದಗಿರಿ, ಚಿತ್ರದುರ್ಗ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸ್ಥಾಪನೆಯಾಗಲಿದೆ. ಯಾದಗಿರಿ ಜಿಲ್ಲೆಯ ಮುದ್ನಾಳ್‌ ಗ್ರಾಮದಲ್ಲಿ, ಚಿತ್ರದುರ್ಗದ ಕುಂಚಿಗನಾಳ್ ಗ್ರಾಮ ಹಾಗೂ ರಾಯಚೂರಿನ ಸಿಂಧನೂರು ತಾಲೂಕಿನ ಎಳರಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯಗಳು ನಿರ್ಮಾಣವಾಗಲಿವೆ. ಅದರೊಂದಿಗೆ ಕರ್ನಾಟಕದಲ್ಲಿ ಒಂದು ಹೊಸ ನವೋದಯ ವಿದ್ಯಾಲಯಕ್ಕೆ ಸಂಪುಟ ಒಪ್ಪಿಗೆ ನೀಡಿದೆ.

ಬಳ್ಳಾರಿಯಲ್ಲಿ ನವೋದಯ ವಿದ್ಯಾಲಯ ನಿರ್ಮಾಣವಾಗಲಿದೆ.ಹೊಸ ಕೆವಿಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಒಟ್ಟು 5,872.08 ಕೋಟಿ ಹಣ ಮೀಸಲಿಡುವುದಾಗಿ ತಿಳಿಸಿದೆ.

ದೇಶದಾದ್ಯಂತ 28 ಹೊಸ ನವೋದಯ ವಿದ್ಯಾಲಯಗಳನ್ನು (NVs) ಸ್ಥಾಪಿಸಲು ಕ್ಯಾಬಿನೆಟ್ ಅನುಮೋದಿಸಿದೆ. ನವೋದಯಗಳ ಸ್ಥಾಪನೆಗೆ ಒಟ್ಟು ಅಂದಾಜು 2359 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments