ಗದಗ, ಏಪ್ರಿಲ್ 4: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತ್ಯೋತ್ಸವವನ್ನು ಗದಗ ಜಿಲ್ಲಾಡಳಿತದ ವತಿಯಿಂದ ಆಚರಿಸಲು ತೀರ್ಮಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಶನಿವಾರ, ಏಪ್ರಿಲ್ 5, 2025 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಆಡಳಿತದ ಸಭಾಂಗಣದಲ್ಲಿ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಡಳಿತದ ನಿರ್ದೇಶನದಂತೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸಲಾಗುವುದು.
ಈ ಮಹತ್ವದ ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯ ಗಣ್ಯರು, ಸಾರ್ವಜನಿಕರು ಹಾಗೂ ಸಮಾಜದ ಎಲ್ಲಾ ವರ್ಗದ ಜನರು ಆಗಮಿಸಿ ಭಾಗವಹಿಸಿ, ಜಯಂತ್ಯೋತ್ಸವವನ್ನು ಸ್ಮರಣೀಯವಾಗಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ, ಮಹೇಶ್ ಪೋತದಾರ ಅವರು ಕೋರಿದ್ದಾರೆ.