11
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಮಂಡ್ಯದಲ್ಲಿ ಡಿಸೆಂಬರ್ 20ರಿಂದ ಮೂರು ದಿನ ಕಾಲ ಅದ್ಧೂರಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.