Sunday, April 20, 2025
Homeರಾಜ್ಯನಾಳೆ‌ ಗದಗ ಜಿಲ್ಲೆಗೆ ಸಿಎಂ.ಸಿದ್ಧರಾಮಯ್ಯ ಆಗಮನ!

ನಾಳೆ‌ ಗದಗ ಜಿಲ್ಲೆಗೆ ಸಿಎಂ.ಸಿದ್ಧರಾಮಯ್ಯ ಆಗಮನ!

ಗದಗ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 15 ರಂದು (ರವಿವಾರ) ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಇವರ ಈ ಕೆಳಗಿನಂತಿದೆ.

ಡಿಸೆಂಬರ್ 15 ರಂದು ಬೆ 11.05 ಗಂಟೆಗೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಶ್ರೀಮತಿ ಕಮಲಾಬಾಯಿ ನಾರಾಯಣರಾವ್ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು.

ನಂತರ ಬೆ 11.30 ಗಂಟೆಗೆ ಹರ್ಲಾಪುರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಯಿಂದ ಆಯೋಜಿಸಲಾದ ಶ್ರೀ ಬೀರಲಿಂಗೇಶ್ವರ ಹಾಗೂ ಶ್ರೀ ಮಾಳಿಂಗರಾಯ ಮೂರ್ತಿ ಪ್ರತಿಷ್ಟಾಪನೆ ಹಾಗೂ ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ನಂತರ ಮಧ್ಯಾಹ್ನ 12 ಗಂಟೆಗೆ ಹರ್ಲಾಪುರ ಗ್ರಾಮದ ಶ್ರೀಮತಿ ಕಮಲಾಬಾಯಿ ನಾರಾಯಣರಾವ್ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಿ ರೋಣ ಪಟ್ಟಣದ ದಿ. ಪೌಲ್ ಅಕಾಡೆಮಿ ಸ್ಕೂಲ್ ಆವರಣದಲ್ಲಿನ ಹೆಲಿಪ್ಯಾಡ್ ತಲುಪುವುದು.

ಮಧ್ಯಾಹ್ನ 12.15 ಗಂಟೆಗೆ ರೋಣದ ಡ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಿಂದ ಆಯೋಜಿಸಿರುವ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ನಂತರ ಸಂಜೆ 4 ಗಂಟೆಗೆ ರೋಣದಿಂದ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಿ ಸಂಜೆ 5 ಗಂಟೆಗೆ ಬೆಳಗಾವಿಯ ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments