ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಹಗರಣ ಸದ್ಯ ಪ್ರಚಲಿತದಲ್ಲಿದೆ. ವಿರೋಧ ಪಕ್ಷವಾದ ಬಿಜೆಪಿ ಸಿಎಂ ರಾಜೀನಾಮೆ ಖಚಿತ ಎಂದು ಭವಿಷ್ಯದ ಮಾತಿನಲ್ಲೇ ತನ್ನ ಹೋರಾಟ ಮುಂದುವರೆಸಿದೆ.
ಇದೇ ಸಂದರ್ಭದಲ್ಲಿ ಸಿದ್ಧರಾಮಯ್ಯರ ಮಾತು ಹಲವು ಪ್ರಶ್ನೆಗಳನ್ನ ಹುಟ್ಟು ಹಾಕುವದಲ್ಲದೇ ಮೂಡಾ ಹಗರಣದಿಂದಾಗಿ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಯ್ತಾ? ಅನ್ನೋ ಚರ್ಚೆ ಶುರುವಾಗಿದೆ.
ಹೌದು,ಇಂದು ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದಲ್ಲಿ ಸರ್ಕಾರಿ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ನಾನು ರಾಜಕೀಯದ ಕೊನೆಗಾಲದಲ್ಲಿದ್ದೇನೆ, ಜನರ ಪ್ರೀತಿ, ಅಭಿಮಾನ ಗಳಿಸದಿದ್ದರೆ ರಾಜಕೀಯದಲ್ಲಿ ಉಳಿಗಾಲವಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ಮುಡಾ ಹಗರಣದ ಆರೋಪದ ನಡುವೆ ಸಿಎಂ ಈ ರೀತಿ ಹೇಳಿಕೆ ನೀಡಿರುವುದು ಅಭಿಮಾನಿಗಳಿಗೆ ಶಾಕ್ ನೀಡಿದ್ದು,ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆ ಆರಂಭಿಸಿದೆ.