ಗದಗ: KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ಹಾಗೂ ಪಾಪನಾಶಿ ಮಾರ್ಗ ಮಧ್ಯೆ ನಡೆದಿದೆ.
ಅಪಘಾತದಲ್ಲಿ ವಸಂತ ವಿರೇಶ ಮುನವರಿ (19) ಅನ್ನೋ ಬೈಕ್ ಸವಾರ ಮೃತನಾಗಿದ್ದು, ಕೊಪ್ಪಳ ಜಿಲ್ಲೆಯ ಮಾಗನೂರ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಕೀರ್ತಿ ಪ್ರೊಜೆಕ್ಟ್ ಪ್ರೈವೇಟ್ ಲಿಮಿಟೆಡ್ ದಲ್ಲಿ ಸೂಪರವೈಜರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಬೆಳಗಿನ ಜಾವ ಈ ಅಪಘಾತ ಸಂಭವಿಸಿದ್ದು ಗದಗನಿಂದ ಮುಂಡರಗಿ ಕಡೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ ಗೆ, ಗದಗ ಕಡೆ ತೆರಳುತ್ತಿದ್ದ ಬೈಕ್ ಸವಾರನ ನಡುವೆ ಈ ಅಪಘಾತ ಸಂಭವಿಸಿದೆ.
ಗದಗ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.