ಲಕ್ಷ್ಮೇಶ್ವರ : ಡಿ.ಕೆ ಶಿವಕುಮಾರ್ ಅವರು ರಾಜ್ಯದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಅವರು ಮುಖ್ಯಮಂತ್ರಿ ಆಗಬೇಕು ಎಂದು ಕಾಂಗ್ರೆಸ್ ಮುಖಂಡ ನೀಲಪ್ಪ ಸರಸೂರಿ ಹೇಳಿದರು.
ವರದಿ : ಪರಮೇಶ ಎಸ್ ಲಮಾಣಿ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ ತೀವ್ರವಾಗುತ್ತಿರುವ ಬೆನ್ನಲ್ಲೇ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಪತ್ರಿಕೆಯೊಂದಿಗೆ ಮಾತನಾಡಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಡಿ.ಕೆ ಶಿವಕುಮಾರ್ ಕಾರಣರಾಗಿದ್ದಾರೆ. ಬೇರೆ ಬೇರೆ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದು ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವಲ್ಲಿ ಮುಂಚುನಿಯಲ್ಲಿ ನಿಂತ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದರು.
ನಾಳೆಯಿಂದ ಅವರ ಅಭಿಮಾನಿಗಳಿಂದ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ದೇವಸ್ಥಾನಗಳಿಗೆ ಪೂಜೆ – ಪುನಸ್ಕಾರ ಮಾಡುತ್ತಿದ್ದೆವೆ. ಅವರ ಅಭಿಮಾನಿಗಳು ಪಕ್ಷಕ್ಕಾಗಿ ದುಡಿದ್ದು, ಡಿ.ಕೆ ಮುಖ್ಯಮಂತ್ರಿ ಆಗಬೇಕೆಂದು ರಾಜ್ಯದ ಜನತೆಯೆ ಕೂಗಾಗಿದೆ ಪಕ್ಷದ ವರಿಷ್ಠರು ಕಾರ್ಯಕರ್ತರ ಮನವಿಯನ್ನು ಗಮನದಲ್ಲಿ ಇಟ್ಟುಕೊಂಡು ಡಿ.ಕೆ ಅವರಿಗೆ ಮುಖ್ಯಮಂತ್ರಿ ಮಾಡಬೇಕು ಎಂದು ಒತ್ತಾಯಿಸಿದರು.
