ಗದಗ, ಏಪ್ರಿಲ್ 21 (ಕರ್ನಾಟಕ ವಾರ್ತೆ): ದೇಶದ ಪ್ರಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ), ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಗಳ ಸಹಯೋಗದಲ್ಲಿ, ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಹಾಗೂ ಮಷಿನ್ ಲರ್ನಿಂಗ್ (ML) ಕ್ಷೇತ್ರಗಳಲ್ಲಿ ವೃತ್ತಿಪರ ತರಬೇತಿಯನ್ನು ನೀಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೇಲಿನ ಈ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಈ ಕಾರ್ಯಕ್ರಮದಡಿಯಲ್ಲಿ ಒಟ್ಟು 200 ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 15,000/- ಗಳಷ್ಟು ಶಿಷ್ಯವೇತನವನ್ನು ಸಹ ಒದಗಿಸಲಾಗುವುದು. ಉದ್ಯೋಗಾವಕಾಶಗಳು ಹೆಚ್ಚುತ್ತಿರುವ ಆಧುನಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ಯುವತೆಯರಿಗೆ ಹಾಗೂ ಯುವಕರಿಗೆ ಅವಕಾಶ ಒದಗಿಸುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಹಮ್ಮಿಕೊಂಡಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಹೊಂದಿರಬೇಕು ಹಾಗೂ ಪರಿಶಿಷ್ಟ ಪಂಗಡದವರೆಂಬ ಮಾನ್ಯತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಏಪ್ರಿಲ್ 25, 2025 ಆಗಿದ್ದು, ಆಸಕ್ತ ಅಭ್ಯರ್ಥಿಗಳು ತಮ್ಮ ಪೂರ್ಣ ಮಾಹಿತಿಯೊಂದಿಗೆ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ, ಗದಗ ಇವರಿಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
